ಬಿಗ್ ಬಾಸ್ ಕನ್ನಡ ಸೀಸನ್ 12 sec ಒಂದಿಲ್ಲೊಂದು ವಿಚಾರಗಳಿಗೆ ಸದ್ದಾಗುತ್ತಲೇ ಇದೆ. ಫಿನಾಲೆಗೆ ಇನ್ನೊಂದು ವಾರ ಬಾಕಿ ಉಳಿದಿರುವಾಗ ಸಾಮಾಜಿಕ ಮಾಧ್ಯಮಗಳಲ್ಲಿ ಈಗಾಗಲೇ ಈ ಬಾರಿ ವಿನ್ನರ್ ಯಾರೆಂದು ಅಭಿಮಾನಿಗಳು ಊಹಿಸುತ್ತಿದ್ದಾರೆ. ಈ ಬೆನ್ನಲ್ಲೇ ಕಿಚ್ಚ ಸುದೀಪ್ ವಿರುದ್ಧವೂ ಇದೀಗ ವ್ಯಾಪಕ ಟೀಕೆ ಕೇಳಿಬರುತ್ತಿದೆ. ಕಳೆದ ಶನಿವಾರ ಮತ್ತು ಭಾನುವಾರ ನಡೆದ ಕಿಚ್ಚನ ಪಂಚಾಯಿತಿಯಲ್ಲಿ ಧ್ರುವಂತ್ ಅವರಿಗೆ ಕಿಚ್ಚನ ಚಪ್ಪಾಳೆ ಸಿಕ್ಕಿದ್ದೇ ಇದಕ್ಕೆ ಕಾರಣ.
ಸಾಮಾನ್ಯವಾಗಿ ಪ್ರತಿ ವಾರ ಚೆನ್ನಾಗಿ ಆಡುವ ಮತ್ತು ಕಿಚ್ಚನ ಮನಸ್ಸು ಗೆಲ್ಲುವ ಸ್ಪರ್ಧಿಗೆ ಕಿಚ್ಚನ ಚಪ್ಪಾಳೆ ಸಿಗುತ್ತದೆ. ಈ ವೇಳೆ ಚಪ್ಪಾಳೆ ತಟ್ಟುವ ಸುದೀಪ್, ಸ್ಪರ್ಧಿಗಳ ಆಟವನ್ನು ಹೊಗಳುತ್ತಾರೆ ಮತ್ತು ವೈಯಕ್ತಿಕವಾಗಿ ಕಿಟ್ ಅನ್ನು ಸಹ ನೀಡುತ್ತಾರೆ. ಈ ಆವೃತ್ತಿಯ ಕೊನೆಯ ಕಿಚ್ಚನ ಪಂಚಾಯಿತಿಯಲ್ಲಿ ಇಥ ಮೊದಲ ಬಾರಿಗೆ ಕಿಚ್ಚ ಸುದೀಪ್ ಇಡೀ ಸೀಸನ್ನ ಆಟವನ್ನು ಪರಿಗಣಿಸಿ ಧ್ರುವಂತ್ ಅವರಿಗೆ ಸೀಸನ್ನ ಕಿಚ್ಚನ ಚಪ್ಪಾಳೆ ನೀಡಿದ್ದರು. ಆದರೆ, ಸುದೀಪ್ ಅವರ ಈ ನಿರ್ಧಾರಕ್ಕೆ ವೀಕ್ಷಕರಿಂದ ಭಾರಿ ವಿರೋಧ ವ್ಯಕ್ತವಾಗಿತ್ತು.
ಈ ಸೀಸನ್ನಲ್ಲಿ ಉತ್ತಮವಾಗಿ ಆಡಿದ್ದೀರಿ ಮತ್ತು ಪ್ರೇಕ್ಷಕರಿಗೆ ಭರಪೂರ ಮನರಂಜನೆ ನೀಡಿದ್ದೀರಿ. ಅದಕ್ಕಾಗಿ ನಾನು ಮೊದಲ ಬಾರಿಗೆ ಸೀಸನ್ನ ಚಪ್ಪಾಳೆ ನೀಡುತ್ತಿದ್ದೇನೆ ಎಂದು ಸುದೀಪ್ ಹೇಳಿದ್ದರು. ಹೀಗಾಗಿ, ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಟ್ರೋಲ್ ಮಾಡಲಾಗಿತ್ತು. ಧ್ರುವಂತ್ಗಿಂತ ಗಿಲ್ಲಿ ಮುಂದಿದ್ದಾನೆ ಎಂದು ಕಿಡಿಕಾರಿದ್ದರು. ಇದರ ಪರಿಣಾಮವಾಗಿ ಬಿಗ್ ಬಾಸ್ ಆಯೋಜಕರು ನಿರ್ಧಾರ ಬದಲಿಸಿದ್ದು, ಧ್ರುವಂತ್ ಅವರಿಗೆ ಸೀಸನ್ನ ಚಪ್ಪಾಳೆ ಬದಲು ಈ ವಾರದ ಕಿಚ್ಚನ ಚಪ್ಪಾಳೆ ನೀಡಲಾಗಿದೆ ಎಂದು ಹೇಳಿದ್ದಾರೆ.
