ಮೊಣಕಾಲು ಶಸ್ತ್ರಚಿಕಿತ್ಸೆ
ಮೊಣಕಾಲು ಶಸ್ತ್ರಚಿಕಿತ್ಸೆ ಸಂಬಂಧ ಸಚಿವ ಸುಧಾಕರ್ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಶಸ್ತ್ರಚಿಕಿತ್ಸೆ ನಂತರ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡು ಆರೋಗ್ಯ ಸ್ಥಿತಿ ಚಿಂತಾಜನಕವಾಗಿತ್ತು. ಬಳಿಕ ಅವರನ್ನು ಮಣಿಪಾಲ್ ಆಸ್ಪತ್ರೆಯಿಂದ ಬೆಂಖ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಐಸಿಯುನಲ್ಲಿಯೇ ಇದ್ದ ಸುಧಾರಕರ್ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ಸಚಿವ ಸುಧಾಕರ್ ನಿಧನಕ್ಕೆ ವಿವಿಧ ಗಣ್ಯರು ಮತ್ತು ಸಾರ್ವಜನಿಕರು ಸಂತಾಪ ಸೂಚಿಸಿದ್ದಾರೆ. ಡಿ. ಸುಧಾಕರ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿರುವ ಡಿ. ಸುಧಾಕರ್ ಸ್ಟೇಡಿಯಂನಲ್ಲಿ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ.
ಸಾರ್ವಜನಿಕರು ಮತ್ತು ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕನಿಗೆ ಅಂತಿಮ ನಮನ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅಂತಿಮ ದರ್ಶನದ ಬಳಿಕ, ಡಿ. ಸುಧಾಕರ್ ಅವರ ಅಂತ್ಯ ಸಂಸ್ಕಾರದ ವಿಧಿವಿಧಾನಗಳನ್ನು ನೆರವೇರಿಸಲು ವ್ಯವಸ್ಥೆ ಮಾಡಲಾಗಿದೆ. ಚಳ್ಳಕೆರೆಯಲ್ಲಿರುವ ಸುಧಾಕರ್ ಶಟಲ್ ಕಾಕ್ ಕೋರ್ಟ್‌ನಲ್ಲಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆಗಳು ನಡೆಯುತ್ತಿವೆ.
